ಜಮ್ಮು- ಕಾಶ್ಮೀರ: 10 ವರ್ಷಗಳ ಬಳಿಕ ಚುನಾಯಿತ ಸರ್ಕಾರ ನಿರೀಕ್ಷೆ

Update: 2024-10-08 03:04 GMT

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಕೇಂದ್ರಾಡಳಿತ ಪ್ರದೇಶಕ್ಕೆ ಮೊಟ್ಟಮೊದಲ ಚುನಾವಣೆ ನಡೆದಿದ್ದು, ಹತ್ತು ವರ್ಷಗಳ ಬಳಿಕ ಚುನಾಯಿತ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

90 ಸದಸ್ಯಬಲದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದ್ದು, ಎಲ್ಲ 20 ಎಣಿಕೆ ಕೇಂದ್ರಗಳಲ್ಲಿ ಮೂರು ಸ್ತರಗಳ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

2014ರ ಬಳಿಕ ಮೊಟ್ಟಮೊದಲ ಬಾರಿಗೆ ಮೂರು ಹಂತಗಳ ಚುನಾವಣೆ ನಡೆದಿದೆ. ಸೆಪ್ಟೆಂಬರ್ 18ರಂದು ನಡೆದ ಮೊದಲ ಹಂತದಲ್ಲಿ 24 ಸ್ಥಾನಗಳಿಗೆ, ಸೆಪ್ಟೆಂಬರ್ 26ರಂದು ನಡೆದ 2ನೇ ಹಂತದಲ್ಲಿ 26 ಸ್ಥಾನಗಳಿಗೆ ಮತ್ತು ಅಕ್ಟೋಬರ್ 1ರಂದು ಮೂರನೇ ಹಂತದಲ್ಲಿ 40 ಸ್ಥಾನಗಳಿಗೆ ಮತದಾನ ನಡೆದಿತ್ತು. 873 ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದ್ದು, ಸಂಜೆಯ ವೇಳೆಗೆ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಮತಗಟ್ಟೆ ನಿರ್ಗಮನ ಸಮೀಕ್ಷೆಗಳ ಪ್ರಕಾರ, ನ್ಯಾಷನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಲಿದ್ದು, ಪ್ರಾದೇಶಿಕ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿವೆ. ಬಿಜೆಪಿ 2014ರಲ್ಲಿ ಗಳಿಸಿದ್ದ 25 ಸ್ಥಾನಗಳಿಗೆ ಹೋಲಿಸಿದರೆ ತುಸು ಸುಧಾರಣೆ ಕಾಣಲಿದೆ. ಹಿಂದೆ 28 ಸ್ಥಾನಗಳನ್ನು ಹೊಂದಿದ್ದ ಪಿಡಿಪಿ 10ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News