ಜಮ್ಮು-ಕಾಶ್ಮೀರ, ಪುದುಚೇರಿ ವಿಧಾನಸಭೆ : ಶೇ.33 ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಸ್ತು

Update: 2023-12-12 17:18 GMT

ಲೋಕಸಭೆ | Photo: PTI 

ಹೊಸದಿಲ್ಲಿ: ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕಲ್ಪಿಸುವ ಸಂವಿಧಾನ (106ನೇ ತಿದ್ದುಪಡಿ) ಕಾಯ್ದೆಯ ನಿಬಂಧನೆಗಳನ್ನು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆಗಳಿಗೆ ವಿಸ್ತರಿಸುವ ಎರಡು ಮಸೂದೆಗಳನ್ನು ಲೋಕಸಭೆಯು ಮಂಗಳವಾರ ಅಂಗೀಕರಿಸಿತು.

ಸಹಾಯಕ ಗೃಹಸಚಿವ ನಿತ್ಯಾನಂದ ರಾಯ್ ಅವರು ಜಮ್ಮು-ಕಾಶ್ಮೀರ ಪುನರ್ಸಂಘಟನೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರಕಾರಗಳ (ತಿದ್ದುಪಡಿ) ಮಸೂದೆಯನ್ನು ಸದನದಲ್ಲಿ ಮಂಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News