ಗಡಿಯಾಚೆಗಿನ ಜಿಹಾದಿಗಳು ಕಾಂಗ್ರೆಸ್, ಸಮಾಜವಾದಿ ಪಕ್ಷಗಳನ್ನು ಬೆಂಬಲಿಸುತ್ತಿದ್ದಾರೆ : ಪ್ರಧಾನಿ ಆರೋಪ
ದಿಯೋರಿಯಾ (ಉತ್ತರ ಪ್ರದೇಶ) : ವೋಟ್ ಜಿಹಾದ್ ಮಾಡಲು ಗಡಿಯಾಚೆಗಿನ ಜಿಹಾದಿಗಳು ಕಾಂಗ್ರೆಸ್, ಸಮಾಜವಾದಿ ಪಕ್ಷಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ದಿಯೋರಿಯಾದಲ್ಲಿ ರವಿವಾರ ಚುನಾವಣಾ ರ‍್ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. INDIA ಒಕ್ಕೂಟವು ಭಾರತ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಿಲ್ಲ. ಬದಲಾಗಿ ಹಲವು ದಶಕಗಳ ಹಿಂದೆ ತಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪಾಕಿಸ್ತಾನದಲ್ಲಿ ಇಂಡಿ ಒಕ್ಕೂಟ ಅಧಿಕಾರಕ್ಕೇರಲಿ ಎಂದು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಪ್ರಾರ್ಥನೆಗಳನ್ನು ಮಾಡಲಾಗುತ್ತಿದೆ. ಈ ಎರಡೂ ಪಕ್ಷಗಳು ಇಲ್ಲಿ ವೋಟ್ ಜಿಹಾದ್ ಮಾಡಿ ಎಂದು ಕರೆಕೊಡುವುದರಲ್ಲಿ ನಿರತವಾಗಿದೆ ಎಂದು ಅವರು ಆರೋಪಿಸಿದರು.
ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾವನ್ನು ʼಇಂಡಿ ಜಮಾತ್ʼ ಎಂದು ಮೂದಲಿಸಿದ ಮೋದಿ, ನಾನು ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದಕ್ಕೆ ವಿರೋಧ ಪಕ್ಷಗಳು ನನ್ನ ವಿರುದ್ಧ ಕಿಡಿಕಾರುತ್ತಿವೆ. ದೇಶವು ಬ್ರಹ್ಮೋಸ್ ಕ್ಷಿಪಣಿ ಖರೀದಿಸಲು ಹೊರಟಾಗ ಕಾಂಗ್ರೆಸ್ ಪಕ್ಷವು ಅಡ್ಡಗಾಲು ಹಾಕುವ ಮೂಲಕ ರಕ್ಷಣ ವಲಯದ ಪ್ರಗತಿಗೆ ಮಾರಕವಾಗಿತ್ತು ಎಂದು ಪ್ರಧಾನಿ ಮೋದಿ ಹೇಳಿದರು.
ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.