ಕೇರಳ | ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ ; 27 ಮಂದಿಗೆ ಗಾಯ

Update: 2024-11-19 22:39 IST
ಕೇರಳ | ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ ; 27 ಮಂದಿಗೆ ಗಾಯ

ಸಾಂದರ್ಭಿಕ ಚಿತ್ರ

  • whatsapp icon

ವಯನಾಡ್ : ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ಸೊಂದು ಕೇರಳದ ವಯನಾಡ್‌ನ ತಿರುನೆಲ್ಲಿಯಲ್ಲಿ ಮಂಗಳವಾರ ಬೆಳಗ್ಗೆ ಅಪಘಾತಕ್ಕೀಡಾಗಿದ್ದು, ಕನಿಷ್ಠ 27 ಮಂದಿಗೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸಂಭವಿಸುವ ಸಂದರ್ಭ ಈ ಬಸ್ಸಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ 45 ಮಂದಿ ಅಯ್ಯಪ್ಪ ಭಕ್ತರಿದ್ದರು. ಇವರು ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡಿ ಮೈಸೂರಿನ ಹೊಸೂರಿಗೆ ಹಿಂದಿರುಗುತ್ತಿದ್ದರು.

ಗಾಯಗೊಂಡವರನ್ನು ಕೂಡಲೇ ವಯನಾಡ್‌ನಲ್ಲಿರುವ ಮಾನಂದವಾಡಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News