ಉದ್ಯೋಗಕ್ಕಾಗಿ ಜಮೀನು ಪ್ರಕರಣ: ಲಾಲು ಯಾದವ್, ರಾಬ್ರಿ ದೇವಿ, ತೇಜಸ್ವಿ ಯಾದವ್‌ಗೆ ಜಾಮೀನು

Update: 2023-10-04 05:55 GMT

ಲಾಲು ಯಾದವ್ (PTI)

ಹೊಸದಿಲ್ಲಿ: ʼಉದ್ಯೋಗಕ್ಕಾಗಿ ಜಮೀನುʼ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್, ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಆರ್‌ಜೆಡಿ ಸಂಸದೆ ಮಿಸಾ ಭಾರ್ತಿ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ಈ ಎಲ್ಲಾ ನಾಯಕರು ಇಂದು ರೋಸ್ ಅವೆನ್ಯೂ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.‌

ರೈಲ್ವೆ ಉದ್ಯೋಗ ನೀಡುವ ಭರವಸೆ ನೀಡಿ ಜಮೀನು ಪಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಈ ವರ್ಷದ ಜುಲೈನಲ್ಲಿ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಆಸ್ತಿಯನ್ನು ಜಪ್ತಿ ಮಾಡಿತ್ತು.

ಯುಪಿಎ-1 ಸರಕಾರದಲ್ಲಿ ಲಾಲು ಪ್ರಸಾದ್ ರೈಲ್ವೇ ಸಚಿವರಾಗಿದ್ದ ಅವಧಿಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಯಾದವ್ ಮತ್ತು ಅವರ ಕುಟುಂಬದ ₹ 6 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News