ಪ್ರಧಾನಿ ಮೋದಿ ಕೊನೆಯ ಬಾರಿ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದಾರೆ: ಲಾಲು ಪ್ರಸಾದ್ ಯಾದವ್

Update: 2023-08-15 12:39 GMT

ಪಾಟ್ನಾ: ದಿಲ್ಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊನೆಯ ಬಾರಿಗೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. ಮುಂದಿನ ವರ್ಷ ನಮ್ಮ ಸರದಿ ಎಂದು ರಾಷ್ಟ್ರೀಯ ಜನತಾ ದಳದ (ಆರ್ ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮಂಗಳವಾರ ಪ್ರತಿಪಾದಿಸಿದ್ದಾರೆ.

ತಮ್ಮ ಪತ್ನಿ ರಾಬ್ರಿ ದೇವಿ ಅವರ ನಿವಾಸದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಬಳಿಕ ಸುದ್ದಿಗಾರರೊಂದಿಗೆ ಪ್ರಸಾದ್ ಮಾತನಾಡಿದರು.

ಈ ಸಂದರ್ಭದಲ್ಲಿ ನಾನು ದೇಶದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಹಾಗೂ ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಆಝಾದ್ ಹಾಗೂ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಮಹಾನ್ ವ್ಯಕ್ತಿಗಳಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ. ಅವರ ಕೊಡುಗೆಗಳನ್ನು ರಾಷ್ಟ್ರವು ಎಂದಿಗೂ ಮರೆಯಲಾರದು ಎಂದು ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು.

ಹಲವಾರು ದಶಕಗಳಿಂದ ತನ್ನ ರಾಜಕೀಯ ಜೀವನದಲ್ಲಿ ಬಿಜೆಪಿ ವಿರುದ್ಧ ಹೋರಾಡುತ್ತಿರುವ ಪ್ರಸಾದ್ ಬಳಿ ಕೆಲವು ಪತ್ರಕರ್ತರು ಮುಂದಿನ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ತ್ರಿವರ್ಣ ಧ್ವಜವನ್ನು ಹಾರಿಸಲು ಸಾಧ್ಯವಾಗುತ್ತದೆಯೇ ಎಂದು ಕೇಳಿದರು

"ಇಲ್ಲ, ಸಾಧ್ಯವೇ ಇಲ್ಲ. ಈ ಬಾರಿಯ ಭಾಷಣ ಮೋದಿ ಅವರದ್ದು ಕೊನೆಯದ್ದಾಗಿದೆ’’ ಎಂದು ಉತ್ತರಿಸಿದರು.

ನಿಮ್ಮ ಪ್ರಕಾರ, ಮುಂದಿನ ವರ್ಷ ಸನ್ನಿವೇಶ ಏನಾಗಬಹುದು ಎಂದು ಸುದ್ದಿಗಾರರು ಕೇಳಿದಾಗ,,

"ಮುಂದಿನ ಬಾರಿ, ಇದು ನಮ್ಮ ಸರದಿ’’ ಎಂದು ಹೇಳಿದರು.

ಹಿರಿಯ ರಾಜಕಾರಣಿ ಲಾಲು ಪ್ರಸಾದ್ ಅವರು ಪ್ರತಿಪಕ್ಷಗಳ ಒಕ್ಕೂಟ I.N.D.I.A. ರಚನೆಯಲ್ಲಿ ಮುಖ್ಯ ಪಾತ್ರವಹಿಸಿದ್ದು, ಸದ್ಯ ಅನಾರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News