ಲೋಕಸಭೆ| ವಿವಿಧ ಸ್ಥಾಯಿ ಸಮಿತಿಗಳ ರಚನೆ: ರಾಹುಲ್ ಗಾಂಧಿಗೆ ರಕ್ಷಣಾ ಸಮಿತಿಯಲ್ಲಿ ಸ್ಥಾನ

Update: 2024-09-27 06:13 GMT

ರಾಹುಲ್ ಗಾಂಧಿ |  PTI

ಹೊಸದಿಲ್ಲಿ: 17ನೇ ಲೋಕಸಭೆ ರಚನೆಯಾಗಿ ನಾಲ್ಕು ತಿಂಗಳ ಬಳಿಕ ಇದೀಗ ವಿವಿಧ ಸ್ಥಾಯಿ ಸಮಿತಿಗಳನ್ನು ರಚಿಸಿ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕಾಂಗ್ರೆಸ್‌ಗೆ ವಿದೇಶಾಂಗ ವ್ಯವಹಾರಗಳ ಸಮಿತಿ, ಶಿಕ್ಷಣ, ಮಹಿಳಾ ಸ್ಥಾಯಿ ಸಮಿತಿ, ಮಕ್ಕಳ ಸ್ಥಾಯಿ ಸಮಿತಿ, ಯುವಜನ ಮತ್ತು ಕ್ರೀಡೆ, ಕೃಷಿ, ಪಶುಸಂಗೋಪನೆ, ಆಹಾರ ಸಂಸ್ಕರಣೆ ಮತ್ತು ಗ್ರಾಮೀಣ, ಪಂಚಾಯತ್ ರಾಜ್ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ರಕ್ಷಣಾ ಸಮಿತಿಯಲ್ಲಿ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೆ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದ್ದು, ಸಮಿತಿಯ ಸದಸ್ಯರಾಗಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಸ್ಥಾನ ಪಡೆದುಕೊಂಡಿದ್ದಾರೆ.

ಗೃಹ ವ್ಯವಹಾರಗಳ ಸ್ಥಾಯಿ ಸಮಿತಿ, ರಕ್ಷಣ ಸಮಿತಿ, ಹಣಕಾಸು, ಐಟಿ, ರೈಲ್ವೆ, ಕಾರ್ಮಿಕ, ಜವಳಿ, ಕೌಶಲ್ಯಾಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಜಲ ಸಂಪನ್ಮೂಲ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನವನ್ನು ಬಿಜೆಪಿಯೇ ಉಳಿಸಿಕೊಂಡಿದೆ. ಬಿಜೆಪಿಯು ಎನ್‌ಡಿಎ ಮಿತ್ರಪಕ್ಷಗಳಿಗೆ ಇಂಧನ, ವಸತಿ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಮಿತಿಯನ್ನು ಮೀಸಲಿಟ್ಟಿದೆ.

ಇತರ ವಿರೋಧ ಪಕ್ಷಗಳ ಪೈಕಿ, ವಾಣಿಜ್ಯ ಸಮಿತಿಯ ಅಧ್ಯಕ್ಷರಾಗಿ ಟಿಎಂಸಿಯ ಡೋಲಾ ಸೇನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಿತಿಯ ಮುಖ್ಯಸ್ಥರಾಗಿ ಎಸ್‌ಪಿಯ ರಾಮ್ ಗೋಪಾಲ್ ಯಾದವ್, ಕೈಗಾರಿಕಾ ಸಮಿತಿಯ ಅಧ್ಯಕ್ಷರಾಗಿ ಡಿಎಂಕೆಯ ತಿರುಚಿ ಶಿವ, ಟಿಎಂಸಿಯ ಕೀರ್ತಿ ಆಝಾದ್ ಅವರನ್ನು ರಸಗೊಬ್ಬರ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಣಕಾಸು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕಾಂಗ್ರೆಸ್‌ನ ಶಶಿ ತರೂರ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News