ಲೋಕಸಭಾ ಚುನಾವಣೆ | 96 ಕ್ಷೇತ್ರಗಳಲ್ಲಿ ಶೇ.10.35ರಷ್ಟು ಮತದಾನ
Update: 2024-05-13 10:55 IST

PC : PTI
ಹೊಸದಿಲ್ಲಿ : 10 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ (ಜಮ್ಮು ಮತ್ತು ಕಾಶ್ಮೀರ) 96 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯವರೆಗೆ ಶೇ.10.35 ಮತಚಲಾವಣೆಯಾಗಿದೆ ಎಂದು ತಿಳಿದು ಬಂದಿದೆ.
ಪಶ್ಚಿಮ ಬಂಗಾಳದಲ್ಲಿ ಶೇಕಡಾ 15.24 ರಷ್ಟು ಮತದಾನವಾಗಿದೆ. ಮತದಾನ ನಡೆಯುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ ಶೇ.5.07 ರಷ್ಟು ಮತದಾನವಾಗಿದೆ.
ಆಂಧ್ರಪ್ರದೇಶ ಮತ್ತು ಒಡಿಶಾ ತಮ್ಮ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುತ್ತಿವೆ.