ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ | ಕೋಲ್ಕತ್ತಾದಲ್ಲಿ ಮತ್ತೆ ಶೋಧ ಕಾರ್ಯಾಚರಣೆ ನಡೆಸಿದ ಈಡಿ

Update: 2024-12-14 04:17 GMT

ಮಹಾದೇವ್ ಬೆಟ್ಟಿಗ್ ಆ್ಯಪ್ | Credit: Instagram/@mahadevbookofficial

ಹೊಸದಿಲ್ಲಿ: ಮಹಾದೇವ್ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ಮತ್ತೆ ದಾಳಿ ನಡೆಸಲಾಗಿದ್ದು, 130 ಕೋಟಿ ರೂ.ಗೂ ಅಧಿಕ ಮೌಲ್ಯದ ಭದ್ರತೆಗಳು ಹಾಗೂ ಠೇವಣಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಶುಕ್ರವಾರ ಜಾರಿ ನಿರ್ದೇಶನಾಲಯ ಹೇಳಿದೆ.

ಈ ಶೋಧ ಕಾರ್ಯಾಚರಣೆಯನ್ನು ಗುರುವಾರ ನಡೆಸಲಾಯಿತು ಎಂದು ತನ್ನ ಪ್ರಕಟಣೆಯಲ್ಲಿ ಜಾರಿ ನಿರ್ದೇಶನಾಲಯ ಹೇಳಿದೆ.

ಹಲವಾರು ಛತ್ತೀಸ್‌ಗಢದ ಉನ್ನತ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ಇದಾಗಿದೆ.

ಕೋಲ್ಕತ್ತಾದಲ್ಲಿ ನಡೆದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ 130.57 ಕೋಟಿ ರೂ. ಮೌಲ್ಯದ ಭದ್ರತೆಗಳು, ಬಾಂಡ್‌ಗಳು ಹಾಗೂ ಡಿಮ್ಯಾಟ್ ಖಾತೆಗಳನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆ ನಿಯಮಗಳಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News