ಮುಂಬೈನ ಬಾಂದ್ರಾದಲ್ಲಿ ಮಾಜಿ ಸಚಿವ ಬಾಬಾ ಸಿದ್ದಿಕ್ ಗೆ ಗುಂಡಿಕ್ಕಿ ಹತ್ಯೆ

Update: 2024-10-12 17:48 GMT

ಮುಂಬೈ : ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕ್ ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ದುಷ್ಕರ್ಮಿಗಳು ಶನಿವಾರ ರಾತ್ರಿ ಹತ್ಯೆ ಮಾಡಿದ್ದಾರೆ.

ಬಾಂದ್ರಾ ಈಸ್ಟ್ನ ಶಾಸಕರಾಗಿರುವ ಅವರ ಪುತ್ರ ಜಿಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9.30 ರ ಸುಮಾರಿಗೆ ಸಿದ್ದಿಕ್ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಬಾಂದ್ರಾ ವೆಸ್ಟ್ ನಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜಿಶಾನ್ ಸಿದ್ದಿಕ್ ಅವರನ್ನು ಆಗಸ್ಟ್ ನಲ್ಲಿ ಕಾಂಗ್ರೆಸ್ ನಿಂದ ಉಚ್ಛಾಟಿಸಲಾಗಿತ್ತು. 








 


 


 


Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News