ರಾಷ್ಟ್ರಪತಿ ಆಯೋಜಿಸಿರುವ ಜಿ20 ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನವಿಲ್ಲ

Update: 2023-09-08 04:57 GMT

Photo: PTI

ಹೊಸದಿಲ್ಲಿ: ರಾಷ್ಟ್ರಪತಿಗಳು ಶನಿವಾರ ಆಯೋಜಿಸಿರುವ ಜಿ20 ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ ಎಂದು ಅವರ ಕಚೇರಿ ತಿಳಿಸಿದೆ.

ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯನ್ನು ಹೊಂದಿದ್ದಾರೆ ಮತ್ತು ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರಾಗಿದ್ದಾರೆ.

ಬೇರೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೂ ಆಹ್ವಾನ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಎಲ್ಲಾ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಭಾರತ ಸರಕಾರದ ಎಲ್ಲಾ ಕಾರ್ಯದರ್ಶಿಗಳು ಹಾಗೂ ದೊಡ್ಡ ಕೈಗಾರಿಕೋದ್ಯಮಿಗಳು ಸೇರಿದಂತೆ ಇತರ ಗಣ್ಯ ಅತಿಥಿಗಳು ಕೂಡ ಅತಿಥಿ ಪಟ್ಟಿಯಲ್ಲಿದ್ದಾರೆ.

ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಹಾಗೂ ಎಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿತ್ತು.

ಬಿಹಾರದ ನಿತೀಶ್ ಕುಮಾರ್, ಜಾರ್ಖಂಡ್ ನ ಹೇಮಂತ್ ಸೊರೆನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಎಂ.ಕೆ. ಸ್ಟಾಲಿನ್, ದಿಲ್ಲಿಯ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ನ ಭಗವಂತ್ ಮಾನ್ ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ ಮುಖ್ಯಮಂತ್ರಿಗಳಲ್ಲಿ ಸೇರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News