INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ?
Update: 2023-12-19 13:12 GMT
ಹೊಸದಿಲ್ಲಿ : ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಸ್ತಾವನೆಯನ್ನು ಬೆಂಬಲಿಸಿದ್ದಾರೆ ಎಂದು indiatoday ವರದಿ ಮಾಡಿದೆ.
ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಸೀಟು ಹಂಚಿಕೆ, ಜಂಟಿ ಪ್ರಚಾರದ ನೀಲನಕ್ಷೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ತಂತ್ರವನ್ನು ರೂಪಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.
ಮೈತ್ರಿಕೂಟದ ಸಭೆಯನ್ನು ಈ ಹಿಂದೆ ಡಿಸೆಂಬರ್ 6 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಮಮತಾ ಬ್ಯಾನರ್ಜಿ, ಎಂಕೆ ಸ್ಟಾಲಿನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಿಲ್ಲ ಎಂದು ಹೇಳಿದ ನಂತರ ಸಭೆ ಮುಂದೂಡಲಾಗಿತ್ತು.