ಅಮೃತಸರ | "ಧಾರ್ಮಿಕ ಶಿಕ್ಷೆ" ಅನುಭವಿಸುತ್ತಿದ್ದ ಶಿರೋಮಣಿ ಅಕಾಲಿದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ

Update: 2024-12-04 05:11 GMT

ಸುಖ್ಬೀರ್ ಸಿಂಗ್ ಬಾದಲ್ | PC : PTI 

ಹೊಸದಿಲ್ಲಿ: ಅಮೃತಸರದ ಸ್ವರ್ಣಮಂದಿರದ ಪ್ರವೇಶ ದ್ವಾರದಲ್ಲಿ ಧಾರ್ಮಿಕ ಶಿಕ್ಷೆ ಅನುಭವಿಸುತ್ತಿದ್ದ ಶಿರೋಮಣಿ ಅಕಾಲಿದಳದ (ಎಸ್ಎಡಿ) ಮುಖಂಡ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೋರ್ವ ಬುಧವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದಾನೆ.

ಬಾದಲ್‌ ಅವರು ಅಮೃತಸರದ ಸ್ವರ್ಣಮಂದಿರದ ಪ್ರವೇಶ ದ್ವಾರದಲ್ಲಿ ನೀಲಿ ಸಮವಸ್ತ್ರ ಧರಿಸಿ ಗಾಲಿಕುರ್ಚಿಯಲ್ಲಿ ಕುಳಿತುಕೊಂಡು  ಕುತ್ತಿಗೆಗೆ ಫಲಕ ಮತ್ತು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು  'ತಂಖಾ' ಎಂದು ಕರೆಯಲ್ಪಡುವ ಧಾರ್ಮಿಕ ಶಿಕ್ಷೆಯನ್ನು ಅನುಭವಿಸುತ್ತಿದ್ದರು. 

ಪೊಲೀಸರ ಪ್ರಕಾರ, ದಾಳಿಕೋರನನ್ನು ನಾರಾಯಣ ಸಿಂಗ್ ಚೌರಾ ಎಂದು ಗುರುತಿಸಲಾಗಿದ್ದು, ಆತನನ್ನು ತಕ್ಷಣ ವಶಕ್ಕೆ ತೆಗೆದುಕೊಳ್ಳಲಾಗಿದೆ. ದಾಳಿಯ ಉದ್ದೇಶ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News