ಸಚಿವ ಬಿ.ನಾಗೇಂದ್ರ ಅವರ ರಾಜಿನಾಮೆ ಕೇಳಿಲ್ಲ : ಸಿಎಂ ಸಿದ್ದರಾಮಯ್ಯ

Update: 2024-06-03 09:46 GMT

ಬೆಂಗಳೂರು : "ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ 6ರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ʼಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದುʼ ಎಂದು ಹೇಳಿದರು.

ಬೆಂಗಳೂರಿನಲ್ಲಿ ಉತ್ತಮ ಮಳೆ :

ಬೆಂಗಳೂರಿನಲ್ಲಿ ಒಳ್ಳೆಯ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಎಕ್ಸಿಟ್ ಪೋಲ್: ಸಂಪೂರ್ಣ ತಳ್ಳಿಹಾಕುತ್ತೇವೆ

ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿ, "ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News