ಅದಾನಿ ವಿರುದ್ಧ ಲಂಚದ ಆರೋಪ | ಮೋದಿ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯಬೇಕು ಎಂದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ
ಹೊಸದಿಲ್ಲಿ: ಅದಾನಿ ವಿರುದ್ಧದ ವಂಚನೆ ಮತ್ತು ಲಂಚ ಕುರಿತ ಯುಎಸ್ ದೋಷಾರೋಪಣೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮೋದಿ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ʼಅದಾನಿ ಮತ್ತು ಕಂಪನಿ ವಿರುದ್ಧ US ನ್ಯಾಯಾಲಯಗಳಲ್ಲಿನ ದೋಷಾರೋಪಣೆಯು ಭಾರತ ಸರ್ಕಾರದ ಘನತೆಗೆ ಧಕ್ಕೆ ಉಂಟು ಮಾಡುತ್ತದೆ. ಆದ್ದರಿಂದ ಮೋದಿ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯಬೇಕುʼ ಎಂದು ಆಗ್ರಹಿಸಿದ್ದಾರೆ.
ಗೌತಮ್ ಅದಾನಿ ಮತ್ತು ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ನಿರ್ದೇಶಕರಾಗಿರುವ ಅವರ ಸೋದರಳಿಯ ಸಾಗರ್ ಸೇರಿದಂತೆ ಇತರ 7 ಆರೋಪಿಗಳು 2020 ಮತ್ತು 2024ರ ನಡುವೆ ಸೌರ ಗುತ್ತಿಗೆ ಪಡೆಯಲು ಭಾರತೀಯ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಯುಎಸ್ ಪ್ರಾಸಿಕ್ಯೂಟರ್ ಗಳು ಆರೋಪಿಸಿದ್ದರು. ಇದರ ಬೆನ್ನಲ್ಲೇ ಅದಾನಿ ವಿರುದ್ಧ ನ್ಯೂಯಾರ್ಕ್ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿತ್ತು.
Modi must now resign from public life because of what material will come out in US courts from Adani & co will devastate Indian government’s reputation.
— Subramanian Swamy (@Swamy39) November 25, 2024