ಮುಂಬೈ: ಲ್ಯಾಂಡಿಗ್ ವೇಳೆ ರನ್‌ವೇಯಿಂದ ಜಾರಿದ ಖಾಸಗಿ ವಿಮಾನ; ಮೂವರಿಗೆ ಗಾಯ

Update: 2023-09-14 13:24 GMT

Photo: PTI 

ಮುಂಬೈ: ಗುರುವಾರ ಸಂಜೆ ಸುರಿದ ಭಾರೀ ಮಳೆಯ ನಡುವೆ ಮುಂಬೈ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ರನ್‌ವೇಯಿಂದ ಜಾರಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು ಎಂಟು ಮಂದಿ ಇದ್ದರು ಎಂದು ವರದಿಯಾಗಿದೆ.

ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ರನ್‌ವೇಯನ್ನು ಕೆಲವು ನಿಮಿಷಗಳ ಕಾಲ ಮುಚ್ಚಲಾಗಿದ್ದು, ಇದೇ ವೇಳೆ ಇಲ್ಲಿ ಲ್ಯಾಂಡ್‌ ಆಗಬೇಕಿದ್ದ ವಿಸ್ತಾರಾ ಏರ್‌ಲೈನ್ಸ್ ವಿಮಾನವನ್ನು ಗೋವಾದ ಮೋಪಾ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News