ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಮೈಸೂರು ಮೂಲದ ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ ಆತ್ಮಹತ್ಯೆ

Update: 2025-04-29 23:51 IST
ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಮೈಸೂರು ಮೂಲದ ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ ಆತ್ಮಹತ್ಯೆ

Photo Source: holoworld.one

  • whatsapp icon

ಬೆಂಗಳೂರು: ಅಮೆರಿಕದ ವಾಷಿಂ‌ಗ್ಟನ್ ಸಮೀಪದ ನ್ಯೂ ಕ್ಯಾಸೆಲ್‌ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೈಸೂರು ಮೂಲದ ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ (57) ಪತ್ನಿ ಶ್ವೇತಾ ಹಾಗೂ 14 ವರ್ಷದ ಪುತ್ರನಿಗೆ ಗುಂಡಿಕ್ಕಿ ಹತ್ಯೆಗೈದು ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ ಘಟನೆ ವರದಿಯಾಗಿದೆ.

7 ವರ್ಷದ ಮತ್ತೊಬ್ಬ ಪುತ್ರ ಮನೆಯ ಹೊರಗೆ ಇದ್ದುದರಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಅಮೆರಿಕ ಕಾಲಮಾನದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿನ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಮಂಡ್ಯದ ಕೆ.ಆರ್‌.ಪೇಟೆ ತಾಲ್ಲೂಕಿನ ಕಿಕ್ಕೇರಿಯವರಾದ ಹರ್ಷವರ್ಧನ್‌ ಅವರು ಮೈಸೂರಿನ ಎಸ್‌ಜೆಸಿಇ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಮೈಕ್ರೋಸಾಫ್ಟ್‌ ನಲ್ಲಿ ಉದ್ಯೋಗಕ್ಕೆ ಸೇರಿದ್ದರು. ನಂತರ ರೋಬೊಟಿಕ್‌ ತಂತ್ರಜ್ಞಾನ ಆಧಾರಿತ ‘ಹೋಲೊವರ್ಲ್ಡ್’ ಹಾಗೂ ‘ಹೋಲೊಸ್ಯೂಟ್‌’ ಕಂಪೆನಿಗಳನ್ನು ಸ್ಥಾಪಿಸಿದ್ದರು. ಕಂಪೆನಿಯ ಉತ್ಪನ್ನಗಳಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ರಾಯಭಾರಿ ಆಗಿದ್ದರು.

ಹರ್ಷವರ್ಧನ್ ಅವರು ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸ್ಟಾರ್ಟಪ್ ಸ್ಥಾಪಿಸಲು ವಿದ್ಯಾರ್ಥಿಗಳನ್ನು ಉತ್ತೇಜಿಸುತ್ತಿದ್ದರು.

ಹರ್ಷವರ್ಧನ್ ಅವರ ತಾಯಿ ಗಿರಿಜಾ ನಾರಾಯಣ್‌ ಹಾಗೂ ಸಹೋದರ ಚೇತನ್ ಅವರು ಮೈಸೂರಿನ ವಿಜಯನಗರದಲ್ಲಿ ನೆಲೆಸಿದ್ದಾರೆ.

ಹರ್ಷವರ್ಧನ ಅವರ ತಂದೆ ಭಾಷಾತಜ್ಞ ಕಿಕ್ಕೇರಿ ನಾರಾಯಣ್‌ 2017ರಲ್ಲಿ ಮೃತಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News