ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಝ್, ಶಿಕ್ಷಕರಿಗೆ ಥಳಿಸಿದ ಗುಂಪು

Update: 2023-10-03 17:41 GMT

PHOTO : x \ @zoo_bear

ಅಹಮದಾಬಾದ್ : ಇಲ್ಲಿನ ಖಾಸಗಿ ಶಾಲೆಯೊಂದು ಜಾಗೃತಿ ಕಾರ್ಯಕ್ರಮದ ಭಾಗವಾಗಿ ಹಿಂದೂ ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಹೇಳಿದೆ ಎಂದು ಆರೋಪಿಸಿ, ಮಂಗಳವಾರ ಸಂಘ ಪರಿವಾರದ ಕಾರ್ಯಕರ್ತರ ಪ್ರತಿಭಟನೆ ನಡೆಸಿ, ಶಿಕ್ಷಕರನ್ನು ಥಳಿಸಿದ ಘಟನೆ ನಡೆದಿದೆ ಎಂದು ndtv.com ವರದಿ ಮಾಡಿದೆ.

ಪ್ರತಿಭಟನಾಕಾರರು ಶಿಕ್ಷಕರನ್ನು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್ 29 ರಂದು ಅಹಮದಾಬಾದ್‌ನ ಘಟ್ಲೋಡಿಯಾ ಪ್ರದೇಶದ ಕಲೋರೆಕ್ಸ್ ಫ್ಯೂಚರ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಘಟನೆಯ ಕುರಿತು ಕ್ಷಮೆಯಾಚಿಸಿರುವ ಶಾಲೆಯ ಆಡಳಿತ ಮಂಡಳಿ, ಈ ಕಾರ್ಯಕ್ರಮವು ವಿವಿಧ ಧರ್ಮಗಳ ಆಚರಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಯಾವುದೇ ವಿದ್ಯಾರ್ಥಿಯನ್ನು ನಮಾಝ್ ಮಾಡಲು ಒತ್ತಾಯಿಸಿಲ್ಲ, ಎಂದು ಸ್ಪಷ್ಟೀಕರಣ ನೀಡಿದೆ.


Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News