ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
ಎಎಪಿಯ ಸೋಮನಾಥ್ ಭಾರ್ತಿ ವಿರುದ್ಧ ಬಿಜೆಪಿಯ ಬಾನ್ಸುರಿ ಸ್ವರಾಜ್ ಅವರಿಗೆ ಹೊಸದಿಲ್ಲಿ ಕ್ಷೇತ್ರದಲ್ಲಿ 78,000 ಮತಗಳ ಅಂತರದ ಗೆಲವು
ನಾವು INDIA ಒಕ್ಕೂಟ ರಚಿಸಿದ ದಿನವೇ ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸಬೇಕು ಮತ್ತು ಸಂವಿಧಾನವನ್ನು ಉಳಿಸಬೇಕು ಎಂದು ನಿರ್ಧರಿಸಿದ್ದೆವು : ಉದ್ಧವ್ ಠಾಕ್ರೆ
ಪಂಜಾಬ್| ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಾಯಕಿ ಹರ್‌ಸಿಮ್ರತ್ ಕೌರ್ ಬಾದಲ್ ಬಟಿಂಡಾದಿಂದ ಗೆದ್ದಿದ್ದಾರೆ
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಬಿಹಾರದ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ 81,480 ಮತಗಳಿಂದ ಗೆಲುವು
ಬಂಗಾಳದ ಬಂಕುರಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಟಿಎಂಸಿಯ ಅರೂಪ್ ಚಕ್ರವರ್ತಿ ಅವರು 32,778 ಮತಗಳಿಂದ ಸೋಲಿಸಿದ್ದಾರೆ.
ಕಾಂಗ್ರೆಸ್‌ನ ಮನೀಶ್ ತಿವಾರಿ ಅವರು ಚಂಡೀಗಢ ಕ್ಷೇತ್ರದಲ್ಲಿ ಬಿಜೆಪಿಯ ಸಂಜಯ್ ಟಂಡನ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ
ಹೈದರಾಬಾದ್‌ನಲ್ಲಿ ಬಿಜೆಪಿಯ ಮಾಧವಿ ಲತಾ ಅವರನ್ನು 3.3 ಲಕ್ಷ ಮತಗಳಿಂದ ಸೋಲಿಸಿದ ಅಸಾದುದ್ದೀನ್ ಉವೈಸಿ
ಬಿಜೆಪಿ ಗೌತಮ್ ಬುದ್ಧನಗರದ ಅಭ್ಯರ್ಥಿ ಮಹೇಶ್ ಶರ್ಮಾ 559472 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ನಾನು INDIA ಒಕ್ಕೂಟದ ಭಾಗ. ನಾಳೆ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದೇನೆ : ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ