ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಜಮ್ಮು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಜೈಲಿನಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಕ್ ವಿರುದ್ದ ನ್ಯಾಷನಲ್ ಕಾನ್ಫರೆನ್ಸ್ ನ ಉಮರ್ ಅಬ್ದುಲ್ಲಾ ಗೆ ಸೋಲು
ಅಸ್ಸಾಂನ ಧುಬ್ರಿ ಕ್ಷೇತ್ರದಲ್ಲಿ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ನ ಮುಹಮ್ಮದ್ ಬದ್ರುದ್ದೀನ್ ಅಜ್ಮಲ್ ಅವರಿಗೆ 429,578 ಮತಗಳ ಹಿನ್ನಡೆ. ಕಾಂಗ್ರೆಸ್ ನ ರಾಕಿಬುಲ್ ಹುಸೇನ್ ಮುನ್ನಡೆ.
ಆಂಧ್ರಪ್ರದೇಶದಲ್ಲಿ ಟಿಡಿಪಿ ಪ್ರಾಭಲ್ಯ | ಚಂದ್ರಬಾಬು ನಾಯ್ಡು ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಒಡಿಶಾದಲ್ಲಿ ಬಿಜೆಡಿಯನ್ನು ಸೋಲಿನ ದಡಕ್ಕೆ ಮುಟ್ಟಿಸಿದ ಬಿಜೆಪಿ
ಒಡಿಶಾದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಬಿಜೆಡಿಯನ್ನು ಹೀನಾಯವಾಗಿ ಸೋಲಿನ ದಡಕ್ಕೆ ಮುಟ್ಟಿಸಿದೆ. ಅಲ್ಲದೇ ವಿಧಾನಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಿರುವ ಬಿಜೆಪಿಯು, 24 ವರ್ಷಗಳಲ್ಲಿ ಮೊದಲ ಬಾರಿಗೆ ಬಿಜೆಡಿ ಹೊರತಾದ ಸರಕಾರ ರಚನೆ ಮಾಡಲಿದೆ.
ಬೆಂಗಳೂರು ಗ್ರಾಮಾಂತರ: ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ರಿಗೆ ಭರ್ಜರಿ ಗೆಲುವು
ಕಲುಬುರಗಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 40 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು. ಅಧಿಕೃತ ಘೋಷಣೆ ಬಾಕಿ
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 35,280 ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 35,280 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 1,99,997 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,64,717 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 1,00,289 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಅವರ ಪತ್ನಿ ಡಿಂಪಲ್ ಯಾದವ್ ಉತ್ತರ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ಸೆಂಟ್ರಲ್: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಗೆ ಭಾರೀ ಮುನ್ನಡೆ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 83381 ಮತಗಳ ಮುನ್ನಡೆ ಗಳಿಸಿದ್ದಾರೆ.
ಮನ್ಸೂರ್ ಅಲಿ ಖಾನ್ 454382 ಮತಗಳನ್ನು ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ 37100
ಮತಗಳನ್ನು ಗಳಿಸಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಶೋಭಾ ಕರಂದ್ಲಾಜೆಗೆ 1,51,047 ಮತಗಳ ಮುನ್ನಡೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 151047 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದರೆ.
ಶೋಭಾ ಕರಂದ್ಲಾಜೆ 628702 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ - 477655 ಮತಗಳನ್ನು ಗಳಿಸಿದ್ದಾರೆ.