ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಬೀದರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು
ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಬಹುತೇಕ ಖಚಿತ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಸಂಸದರಾಗಿ ಬಿ.ವೈ.ರಾಘವೇಂದ್ರ ಜಯಬೇರಿ ಬಾರಿಸಿದ್ದು, ಅಧಿಕೃತ ಘೋಷಣೆ ಆಗಬೇಕಿದೆ.
ಎರಡನೇ ಬಾರಿ ರಾಘವೇಂದ್ರ ಎದುರು ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ.
ಹಾಲಿ ಸಂಸದ ಬಿ.ವೈ.ರಾಘವೇಂದ್ರ 1,81,000 ಅಧಿಕ ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ 1.7 ಲಕ್ಷ ನೋಟಾ ಮತಗಳು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಡಾ.ಸಿ.ಎನ್.ಮಂಜುನಾಥ್ ರಿಗೆ ಭಾರೀ ಮುನ್ನಡೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ 1,84,661 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆ 1,80,030 ಮುನ್ನಡೆ
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ 18 ಸುತ್ತುಗಳ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 1,80,030 ಮತಗಳಿಂದ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸುನೀಲ್ 711329 ಮತಗಳನ್ನು ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ 531299 ಮತಗಳನ್ನು ಗಳಿಸಿದ್ದಾರೆ.
ಹಾಸನದಲ್ಲಿ ಶ್ರೇಯಸ್ ಪಟೇಲ್ ವಿರುದ್ಧ ಪ್ರಜ್ವಲ್ ರೇವಣ್ಣಗೆ ಸೋಲು
ಅಸ್ಸಾಂನ ಜೋರ್ಹತ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಗೌರವ್ ಗೊಗೊಯ್ 92470 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ವಿರುದ್ಧ ಬಿ.ವೈ.ರಾಘವೇಂದ್ರ ಗೆಲುವು
ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು | ರಾಜೀನಾಮೆ ನೀಡಲು ಮುಂದಾದ ಸಿಎಂ ಜಗನ್ ಮೋಹನ್ ರೆಡ್ಡಿ