ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 35 ಸಾವಿರ ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 35,012 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 1,80,358 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,45,346 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 91,935 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
ತ್ರಿಶೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿಗೆ ಗೆಲುವು
ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಗೆ ಗೆಲುವು
ಧಾರವಾಡ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಗೆ 82264 ಮತಗಳ ಮುನ್ನಡೆ
ಪ್ರಹ್ಲಾದ ಜೋಶಿ- 656095 ಮತ
ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ- 573831 ಮತ
ಕೊಯಂಭತ್ತೂರು ಕ್ಷೇತ್ರದಲ್ಲಿ ಅಣ್ನಾಮಲೈಗೆ ಸೋಲು.
ಯೂಸುಫ್ ಫಠಾಣ್ ಗೆ ಮುನ್ನಡೆ
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಹೈದರಾಬಾದ್ ಕ್ಷೇತ್ರದಿಂದ 1,19,079 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಜೈಲಿನಲ್ಲಿರುವ ಖಾಲಿಸ್ತಾನಿ ಅಮೃತ್ಪಾಲ್ ಸಿಂಗ್ ಪಕ್ಷೇತರ ಅಭ್ಯರ್ಥಿಯಾಗಿ ಕದೂರ್ ಸಾಹೇಬ್ ಕ್ಷೇತ್ರದಿಂದ ಮುನ್ನಡೆ
ಉತ್ತರಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ 54,837 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಮುನ್ನಡೆ ಪಡೆದುಕೊಂಡಿದ್ದಾರೆ.
ಲಡಾಖ್ ಲೋಕಸಭಾ ಕ್ಷೇತ್ರ
ಸ್ವತಂತ್ರ ಅಭ್ಯರ್ಥಿ ಮುಹಮ್ಮದ್ ಹನೀಫಾ 19474 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನ ತ್ಸೆರಿಂಗ್ ನಮ್ಗ್ಯಾಲ್ ಅವರು 19474 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.
ಬಿಜೆಪಿಯ ತಾಶಿ ಗ್ಯಾಲ್ಸನ್ 22956 ಮತಗಳಿಂದ ಹಿನ್ನಡೆ ಪಡೆದಿದ್ದಾರೆ.