ನಾಳೆ ನಡೆಯಬೇಕಿದ್ದ NEET-PG ಪರೀಕ್ಷೆ ಮುಂದೂಡಿಕೆ

Update: 2024-06-22 17:42 GMT

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆಯಲ್ಲಿ ಶನಿವಾರ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯ ಮುಖ್ಯಸ್ಥರನ್ನು ಅವರ ಸ್ಥಾನದಿಂದ ವಜಾಗೊಳಿಸಿದ ಬೆನ್ನಲ್ಲೇ ಜೂ. 23ರಂದು (ರವಿವಾರ) ನಡೆಯಬೇಕಿದ್ದ NEET-PG ಪರೀಕ್ಷೆಯನ್ನೂ ಮುಂದೂಡಲಾಗಿದೆ.

ಪರೀಕ್ಷೆಗೆ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಗೆ ಸಂಬಂಧಿಸಿದಂತೆ ಇತ್ತೀಚಿನ ಘಟನೆಗಳನ್ನು ಪರಿಗಣಿಸಿ, ಆರೋಗ್ಯ ಸಚಿವಾಲಯವು ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿಯು ನಡೆಸುವ NEET-PG ಪ್ರವೇಶ ಪರೀಕ್ಷೆಯ ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News