NEET-UG 2024 ಪರೀಕ್ಷೆಯಲ್ಲಿ ಅಕ್ರಮ | ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ
Update: 2024-06-23 12:11 GMT
ಹೊಸದಿಲ್ಲಿ : NEET-UG 2024ದಲ್ಲಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ರವಿವಾರ ಪ್ರಕರಣ ದಾಖಲಿಸಿಕೊಂಡಿದೆ.
ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರವು ಸಿಬಿಐಗೆ ಹಸ್ತಾಂತರಿಸಿತ್ತು. ಪರೀಕ್ಷಾ ಪ್ರಕ್ರಿಯೆಯಲ್ಲಿ ವಂಚನೆ ಮತ್ತು ಇತರ ಅವ್ಯವಹಾರಗಳ ವರದಿಗಳ ನಂತರ ತನಿಖೆಯನ್ನು ಸಿಬಿಐಗೆ ವಹಿಸುವ ನಿರ್ಧಾರಕ್ಕೆ ಬಂದಿತು. NEET ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಗಳನ್ನೂ ಸಿಬಿಐ ತನ್ನ ಕಸ್ಟಡಿಗೆ ತೆಗೆದುಕೊಳ್ಳಲಿದೆ.