ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ: ಮುಂದಿನ ಸೂಚನೆಯವರೆಗೆ ನೀಟ್-ಯುಜಿ ಕೌನ್ಸೆಲಿಂಗ್ ಗೆ ತಡೆ

Update: 2024-07-06 09:47 GMT

ನೀಟ್‌ ಪರೀಕ್ಷೆಯಲ್ಲಿ ಅಕ್ರಮ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ (PTI)

ಹೊಸದಿಲ್ಲಿ: ಮುಂದಿನ ಸೂಚನೆಯವರೆಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್-ಯುಜಿ)ಯ ಕೌನ್ಸೆಲಿಂಗ್ ಅನ್ನು ಶನಿವಾರ ತಡೆ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಕೌನ್ಸೆಲಿಂಗ್ ನ ನೂತನ ದಿನಾಂಕವನ್ನು ಇನ್ನಷ್ಟೆ ಪ್ರಕಟಿಸಬೇಕಿದೆ.

ಜುಲೈ 8ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಯವರೆಗೂ ಕಾಯುವಂತೆ ಪರೀಕ್ಷಾ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿರುವ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ.

ಈ ಪ್ರಕಟಣೆಯ ಬೆನ್ನಿಗೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಬಿಜೆಪಿಯ ನಾಯಕರ ಕೈಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಸುರಕ್ಷಿತವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, “ದಿನಗಳೆದಂತೆ ಇಡೀ ನೀಟ್-ಯುಜಿ ಹಗರಣವು ಮತ್ತಷ್ಟು ಹದಗೆಡತೊಡಗಿದೆ. ಈ ವಿಚಾರದಲ್ಲಿ ಅಜೈವಿಕ ಪ್ರಧಾನಿ ಹಾಗೂ ಅವರ ಜೈವಿಕ ಶಿಕ್ಷಣ ಸಚಿವರು ತಮ್ಮ ಅದಕ್ಷತೆ ಮತ್ತು ಅಸೂಕ್ಷ್ಮತೆಗಳಿಗೆ ಮತ್ತಷ್ಟು ಪುರಾವೆಗಳನ್ನು ಒದಗಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News