ದಿಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯತೆ ಇಲ್ಲ: ಅರವಿಂದ್ ಕೇಜ್ರಿವಾಲ್

Update: 2024-12-11 07:41 GMT

ಅರವಿಂದ್ ಕೇಜ್ರಿವಾಲ್ | PC : PTI 

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಜಂಟಿಯಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂಬ ವರದಿಗಳ ಬೆನ್ನಿಗೇ, ದಿಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಯಾವುದೇ ಮೈತ್ರಿಯ ಸಾಧ್ಯತೆಯನ್ನು ಬುಧವಾರ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ತಳ್ಳಿ ಹಾಕಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಜ್ರಿವಾಲ್, ನಾವು ನಮ್ಮ ಸ್ವಂತ ಬಲದ ಮೇಲೆ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ನೊಂದಿಗೆ ಯಾವುದೇ ಮೈತ್ರಿಯ ಸಾಧ್ಯತೆ ಇಲ್ಲ” ಎಂದು ದಿಲ್ಲಿಯ ಮಾಜಿ ಮುಖ್ಯಮಂತ್ರಿಯೂ ಆದ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಜಂಟಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾಧ್ಯಮಗಳ ವರದಿಗಳ ಬೆನ್ನಿಗೇ ಅವರಿಂದ ಈ ಹೇಳಿಕೆ ಹೊರ ಬಿದ್ದಿದೆ.

ಬುಧವಾರ ನಿಗದಿಯಾಗಿದ್ದ ಕಾಂಗ್ರೆಸ್ ಪಕ್ಷದ ‘ನ್ಯಾಯ್ ಚೌಪಾಲ್’ ಕಾರ್ಯಕ್ರಮ ರದ್ದುಗೊಂಡ ಬೆನ್ನಿಗೇ, ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆ ಇದೆ ಎಂಬ ವದಂತಿಗಳು ದಟ್ಟವಾಗಿ ಹರಡಿದ್ದವು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News