ಮುಂದಿನ ವಿಚಾರಣೆವರೆಗೆ ವಕ್ಫ್ ಕಾಯಿದೆಯ ಪ್ರಮುಖ ತಿದ್ದುಪಡಿಗಳಿಗೆ ಸುಪ್ರೀಂ ಕೋರ್ಟ್ ತಡೆ

Update: 2025-04-17 14:40 IST
ಮುಂದಿನ ವಿಚಾರಣೆವರೆಗೆ ವಕ್ಫ್ ಕಾಯಿದೆಯ ಪ್ರಮುಖ ತಿದ್ದುಪಡಿಗಳಿಗೆ ಸುಪ್ರೀಂ ಕೋರ್ಟ್ ತಡೆ

Photo credit: PTI

  • whatsapp icon

ಹೊಸದಿಲ್ಲಿ: ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯಿದೆಯ ಪ್ರಮುಖ ತಿದ್ದುಪಡಿಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14 ರ ಅಡಿಯಲ್ಲಿ ಕೇಂದ್ರ ಸರಕಾರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ಮೆಹ್ತಾ, ಕೇಂದ್ರ ಸರಕಾರ ಈ ಕುರಿತು 7 ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ. ಈ ಅವಧಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.  



Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News