ಜಮ್ಮು ಕಾಶ್ಮೀರದ ನೂತನ ಸಿಎಂ ಆಗಿ ಉಮರ್ ಅಬ್ದುಲ್ಲಾ ಪ್ರಮಾಣ ವಚನ

Update: 2024-10-16 11:49 IST
ಜಮ್ಮು ಕಾಶ್ಮೀರದ ನೂತನ ಸಿಎಂ ಆಗಿ ಉಮರ್ ಅಬ್ದುಲ್ಲಾ ಪ್ರಮಾಣ ವಚನ

Photo: X/ANI

  • whatsapp icon

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ 6 ವರ್ಷಗಳ ನಂತರ ನೂತನ ಸಿಎಂ ಆಗಿ ಉಮರ್ ಅಬ್ದುಲ್ಲಾ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಪಿಡಿಪಿಯೊಂದಿಗಿನ ಹಿಂದಿನ ಮೈತ್ರಿ ಸರಕಾರದಿಂದ ಬಿಜೆಪಿ ನಿರ್ಗಮಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಆರು ವರ್ಷಗಳಿಂದ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಬಳಿಕ ವಾರಗಳ ಹಿಂದೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟವು ಸರಳ ಬಹುಮತ ಪಡೆಯಿತು.

ಬುಧವಾರ ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಂತಹ ಭಾರತದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News