ನ್ಯಾಯಾಲಯದಲ್ಲಿರುವ ಬಾಕಿ ಪ್ರಕರಣಗಳ ಬಗ್ಗೆ ವಕೀಲರ ಅಭಿಪ್ರಾಯಗಳು ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್

Update: 2024-04-06 09:12 GMT

ಚಂದ್ರಚೂಡ್ (Photo- PTI)

ನಾಗಪುರ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠದ ಶತಮಾನೋತ್ಸವದ ಅಂಗವಾಗಿ ಆಯೋಜಿಸಿರುವ 3 ದಿನಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೊಟ್ಟ ಮೊದಲಿಗೆ ನೀವೆಲ್ಲಾ ನ್ಯಾಯಾಲಯದ ಅಧಿಕಾರಿಗಳು. ನ್ಯಾಯಾಲಯದ ಘನತೆ ಮತ್ತು ಸತ್ಯ ಎತ್ತಿ ಹಿಡಿಯುವುದು ನಿಮ್ಮ ಕೈಯಲ್ಲಿದೆ ಎಂದು ಅವರು ಕಿವಿಮಾತು ಹೇಳಿದರು.

ವಕೀಲರಿಗೂ ತಮ್ಮದೇ ಆದ ರಾಜಕೀಯ ಸೆಳೆತ ಮತ್ತು ನಂಬಿಕೆಗಳಿವೆ. ವಕೀಲರು ನ್ಯಾಯಾಲಯಗಳು ಮತ್ತು ಸಂವಿಧಾನವನ್ನು ಎಲ್ಲದಕ್ಕಿಂತ ಮಿಗಿಲಾಗಿ ಕಾಣಬೇಕು. ಸ್ವತಂತ್ರವಾದ ವಕೀಲರ ಪರಿಷತ್‌ ಕಾನೂನು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ಆಡಳಿತವನ್ನು ರಕ್ಷಿಸುವ ನೈತಿಕ ಭದ್ರಕೋಟೆಯಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News