ಕಾಂಗ್ರೆಸ್‌ ಸ್ಪರ್ಧೆಯಿಂದ ಹೊರಗೆ, ಮಧ್ಯಪ್ರದೇಶದಲ್ಲಿ ಕಮಲ ಅರಳಲಿದೆ: ಪ್ರಧಾನಿ ಮೋದಿ ವಿಶ್ವಾಸ

Update: 2023-11-14 17:13 GMT

ನರೇಂದ್ರ ಮೋದಿ \ Photo: NDTV

ಝಬುವಾ (ಮದ್ಯಪ್ರದೇಶ): “ನಾನು ಕಂಡಂತೆ ಮಧ್ಯಪ್ರದೇಶದಲ್ಲಿ ಕಮಲ ಅರಳಲಿದೆ. ಕಾಂಗ್ರೆಸ್ ಸ್ಪರ್ಧೆಯಲ್ಲಿರುವುದು ನನಗೆ ಕಾಣುತ್ತಿಲ್ಲ. ಅದು ಹೀನಾಯ ಸೋಲು ಅನುಭವಿಸಲಿದೆ. ಜನರು ನ.17ರಂದು ಮತ ಚಲಾಯಿಸುವಾಗ ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡು, ಬಿಜೆಪಿಯನ್ನು ಚುನಾಯಿಸಲಿದ್ದಾರೆ. ಕಾಂಗ್ರೆಸ್ ಅಪಮಾನಕಾರಿ ಸೋಲಿಗೆ ಗುರಿಯಾಗಲಿದೆ" ಎಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಆಡಳಿತಾರೂಢ ಬಿಜೆಪಿ ಪರ ಬಿರುಗಾಳಿಯ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, "ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸೋಲು ಅನುಭವಿಸಲಿದೆ" ಎಂದು ಭವಿಷ್ಯ ನುಡಿದರಲ್ಲದೆ, ಕಾಂಗ್ರೆಸ್ ಪಕ್ಷವು ಆದಿವಾಸಿಗಳನ್ನು ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

"ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಆದಿವಾಸಿಗಳನ್ನು ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡಿತು. ಆದರೆ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವು ನಿರಂತರವಾಗಿ ಅವರ ಕಲ್ಯಾಣಕ್ಕಾಗಿ ಹಾಗೂ ಅವರ ಜೀವನ ಪರಿವರ್ತನೆಗಾಗಿ ದುಡಿದಿದೆ' ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಚುನಾವಣಾ ಸಮಾವೇಶದೊಂದಿಗೆ ಮಧ್ಯಪ್ರದೇಶದಲ್ಲಿನ ತಮ್ಮ ಚುನಾವಣಾ ಪ್ರಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅಂತ್ಯಗೊಳಿಸಿದ್ದಾರೆ.

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ನ.17ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಡಿ. 3ರಂದು ಫಲಿತಾಂಶ ಪ್ರಕಟವಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News