1991ರ ಪೂಜಾ ಸ್ಥಳಗಳ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕೋರಿ ಉವೈಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ

Update: 2025-01-02 10:49 GMT

ಹೊಸದಿಲ್ಲಿ: ಪೂಜಾ ಸ್ಥಳಗಳ(ವಿಶೇಷ ನಿಬಂಧನೆಗಳು) ಕಾಯ್ದೆ-1991ರ ಪರಿಣಾಮಕಾರಿ ಅನುಷ್ಠಾನ ಕೋರಿ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಯನ್ನು ನೀಡಿದೆ.

1947ರ ಆಗಸ್ಟ್ 15ರಂದು ಅಸ್ತಿತ್ವದಲ್ಲಿದ್ದ ಪೂಜಾ ಸ್ಥಳಗಳ ಧಾರ್ಮಿಕ ಸ್ವರೂಪವನ್ನು ಕಾಯ್ದುಕೊಳ್ಳುವಂತೆ 1991ರ ಪೂಜಾ ಸ್ಥಳಗಳ(ವಿಶೇಷ ನಿಬಂಧನೆಗಳು) ಕಾಯ್ದೆ ಹೇಳುತ್ತದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠವು ಉವೈಸಿಯ ಅರ್ಜಿ ವಿಚಾರಣೆಗೆ ಸಮ್ಮತಿಯನ್ನು ನೀಡಿದೆ. ಈ ಪ್ರಕರಣದ ವಿಚಾರಣೆಯು ಫೆಬ್ರವರಿ 17ರಂದು ನಡೆಯಲಿದೆ.

ಉವೈಸಿ ಪರ ಹಾಜರಾದ ವಕೀಲ ನಿಝಾಮ್ ಪಾಷಾ ಈ ಕುರಿತ ಮನವಿಯನ್ನು ಪರಿಗಣಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ವಕೀಲ ಫಝೈಲ್ ಅಹಮ್ಮದ್ ಅಯ್ಯೂಬಿ ಮೂಲಕ ಡಿಸೆಂಬರ್ 17ರಂದು ಉವೈಸಿ ಸುಪ್ರೀಂ ಕೋರ್ಟ್‌ ನಲ್ಲಿ ಈ ಕುರಿತು ಮನವಿ ಸಲ್ಲಿಸಿದ್ದರು. 1991ರ ಪೂಜಾ ಸ್ಥಳಗಳ ಕಾಯ್ದೆ ಸಂಬಂದ ಸಲ್ಲಿಸಲಾಗಿರುವ ಹಲವು ಅರ್ಜಿಗಳು ಕುರಿತು ಡಿಸೆಂಬರ್ 12ರಂದು ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ಪೀಠವು, ಮಸೀದಿ ಅಥವಾ ದರ್ಗಾ ಸೇರಿದಂತೆ ಧಾರ್ಮಿಕ ಸ್ಥಳಗಳ ವಿವಾದದ ಕುರಿತಂತೆ ಕೆಳ ನ್ಯಾಯಾಲಯಗಳು ಯಾವುದೇ ಆದೇಶ ನೀಡದಂತೆ ನಿರ್ಬಂಧ ವಿಧಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News