ಕೇರಳ | ಟಿಎಂಸಿ ಸೇರ್ಪಡೆಯಾದ ಪಕ್ಷೇತರ ಶಾಸಕ ಪಿ.ವಿ.ಅನ್ವರ್ ರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ

Update: 2025-01-13 06:47 GMT

Photo credit: ANI

ತಿರುವನಂತಪುರಂ: ಟಿಎಂಸಿಯನ್ನು ಸೇರ್ಪಡೆಯಾಗಿರುವ ಪಕ್ಷೇತರ ಶಾಸಕ ಪಿ.ವಿ.ಅನ್ವರ್, ಸೋಮವಾರ ನಿಲಂಬುರ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅನ್ವರ್, “ವಿಧಾನಸಭಾ ಸ್ಪೀಕರ್ ಅವರಿಗೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಮಲಪ್ಪುರಂನ ನಿಲಂಬುರ್ ವಿಧಾನಸಭಾ ಕ್ಷೇತ್ರದಿಂದ ಎಡಪಕ್ಷಗಳ ಬೆಂಬಲದೊಂದಿಗೆ ಅನ್ವರ್ ಸ್ವತಂತ್ರ ಶಾಸಕರಾಗಿ ಆಯ್ಕೆಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News