ಜಮ್ಮುಕಾಶ್ಮೀರ | ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ : ಭಾರತೀಯ ಸೇನೆಯಿಂದ ಪ್ರತಿದಾಳಿ

Photo | PTI
ಜಮ್ಮುಕಾಶ್ಮೀರ: ಪಾಕಿಸ್ತಾನದ ಸೈನಿಕರು ಕಳೆದ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯು ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ವರದಿಯಾಗಿದೆ.
ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ಬಳಿಕ ಭಾರತ-ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವ ಮಧ್ಯೆ ಕಳೆದ ಎರಡು ದಿನಗಳಲ್ಲಿ ರಾತ್ರಿ ವೇಳೆ ಪಾಕ್ ಸೇನೆ ಗಡಿನಿಯಂತ್ರಣಾ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಗುಂಡಿನ ಚಕಮಕಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಎಪ್ರಿಲ್ 25 ಮತ್ತು 26ರಂದು ರಾತ್ರಿ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಾದ್ಯಂತ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಪಡೆಗಳು ಸರಿಯಾಗಿ ಪ್ರತಿಕ್ರಿಯೆಯನ್ನು ನೀಡಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.