ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ ವರದಿ ರಾಜ್ಯಸಭೆಯಲ್ಲಿ ಮಂಡನೆ
Update: 2025-02-13 12:36 IST

Screengrab | SansadTV
ಹೊಸದಿಲ್ಲಿ : ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ ವರದಿಯನ್ನು ಮಂಡಿಸಲಾಗಿದ್ದು, ವಿಪಕ್ಷಗಳ ಸಂಸದರು ಗದ್ದಲ ನಡೆಸಿ ಸದನದಿಂದ ಹೊರ ನಡೆದಿದ್ದಾರೆ.
ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ ಸದಸ್ಯೆ ಮೇಧಾ ವಿಶ್ರಮ ಕುಲಕರ್ಣಿ ರಾಜ್ಯಸಭೆಯಲ್ಲಿ ವರದಿಯನ್ನು ಮಂಡಿಸಿದ್ದಾರೆ. ವರದಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದೆ.
ವಕ್ಫ್ ವರದಿ ವಿರೋಧಿಸಿ ವಿರೋಧ ಪಕ್ಷದ ಸಂಸದರು ಲೋಕಸಭೆಯಲ್ಲೂ ಪ್ರತಿಭಟನೆ ನಡೆಸಿದ್ದರಿಂದ ಲೋಕಸಭೆಯ ಅಧಿವೇಶನವನ್ನು ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲಾಗಿದೆ.