ಲೋಕಸಭಾ ಚಳಿಗಾಲದ ಅಧಿವೇಶನ: ಮುಂದುವರಿದ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

Update: 2024-12-20 11:02 IST
Photo of India bloc MPs protest against BJP

Screengrab: X/@INCIndia

  • whatsapp icon

ಹೊಸದಿಲ್ಲಿ: ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಹಾಗೂ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಇಂದೂ ಕೂಡಾ ಇಂಡಿಯಾ ಮೈತ್ರಿಕೂಟದ ಸಂಸದರು ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ, ಕಾಂಗ್ರೆಸ್ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನಿಸಿತ್ತು ಎಂದು ಆರೋಪಿಸಿ NDA ಮೈತ್ರಿಕೂಟದ ಸಂಸದರು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ನಡುವೆ, ನಿನ್ನೆ ಸಂಸತ್ ಭವನದ ಪ್ರವೇಶ ದ್ವಾರದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಹಾಗೂ ಬಿಜೆಪಿ ಸಂಸದರ ನಡುವೆ ನಡೆದ ತಳ್ಳಾಟ ಪ್ರಕರಣದ ಸಂಬಂಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಸಿ.ಪಿ.ಜೋಶಿ, “ದೇಶದ ಜನರು ಎಂದಿಗೂ ಗೂಂಡಾಗಿರಿಯನ್ನು ಸಹಿಸುವುದಿಲ್ಲ” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ವಿರೋಧಿಸಿರುವ ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್, “ನಿನ್ನೆಯ ಘರ್ಷಣೆಗೆ ಬಿಜೆಪಿ ಕ್ಷಮೆ ಯಾಚಿಸಬೇಕು. ಯಾಕೆಂದರೆ, ಅದಕ್ಕೆ ಬಿಜೆಪಿ ಸರಕಾರ ಮತ್ತು ಬಿಜೆಪಿ ಸಂಸದರೇ ಕಾರಣರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಅಲ್ಲದೆ, ದೇಶದ ಪ್ರತಿ ಜನರ ಸಂಕೇತವಾದ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನಿಸಿರುವ ಕುರಿತು ಬಿಜೆಪಿ ಸಂಸದರು ಕ್ಷಮೆ ಯಾಚಿಸಬೇಕು ಎಂದು ನಾವು ಬಯಸುತ್ತೇವೆ ಎಂದೂ ಅವರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News