ಕೆಲಸ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Update: 2024-02-27 04:27 GMT

Photo: PTI

ಇಂದೋರ್: ಕೆಲಸ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ನ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದೋರ್ ನಲ್ಲಿ ನಡೆದಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮೃತ ವ್ಯಕ್ತಿಯನ್ನು ಗೌರವ್ ಗುಪ್ತಾ (35) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಳೆದ ಕೆಲವು ದಿನಗಳಿಂದ ಗುಪ್ತಾ ಅವರು ಕಂಪನಿ ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದ ಒತ್ತಡದಲ್ಲಿದ್ದರು. ಈ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ" ಎಂದು ಪೊಲೀಸ್ ಇನ್ಸ್ಪೆಕ್ಟರ್ ತರೇಶ್ ಕುಮಾರ್ ಸೋನಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News