ಶೀಘ್ರವೇ ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲಾಗುವುದು: ಸಂಸತ್ತಿನಲ್ಲಿ ಪ್ರಧಾನಿ ಮೋದಿ
ಹೊಸದಿಲ್ಲಿ: ಇಡೀ ದೇಶದ ಜನತೆ ಮಣಿಪುರದ ಜನತೆಯೊಂದಿಗೆ ಇದ್ದು, ಮೇ 3ರಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಶೀಘ್ರವೇ ಶಾಂತಿಯನ್ನು ಮರುಸ್ಥಾಪಿಸಲಾಗುವುದು ಎಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಲೋಕಸಭೆಯಲ್ಲಿ ಹೇಳಿದ್ದಾರೆ.
“ಮಣಿಪುರದಲ್ಲಿ ಏನಾಯಿತು ಎಂಬುದರ ಕುರಿತು ಗೃಹ ಸಚಿವ ಅಮಿತ್ ಶಾ ವಿವರವಾದ ಮಾಹಿತಿ ನೀಡಿದ್ದಾರೆ. ಈ ವಿಷಯವು ನ್ಯಾಯಾಲಯದಲ್ಲಿದ್ದು, ಶೀಘ್ರವೇ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. “ಮಣಿಪುರವು ಹೊಸ ವಿಶ‍್ವಾಸದೊಂದಿಗೆ ಮುಂದಡಿ ಇಡಲಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಆರೋಪಿಗಳಿಗೆ ಶಿಕ್ಷೆಯಾಗುವುದನ್ನು ಖಾತ್ರಿಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಏನು ಮಾಡಲು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಿವೆ. ಮುಂದಿನ ದಿನಗಳಲ್ಲಿ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲಾಗುವುದು ಎಂದು ನಾನು ಜನರಿಗೆ ಭರವಸೆ ನೀಡಲು ಬಯಸುತ್ತೇನೆ. ಇಡೀ ದೇಶ ನಿಮ್ಮೊಂದಿಗಿದೆ ಎಂದು ಮಣಿಪುರದ ಮಹಿಳೆಯರು ಹಾಗೂ ಪುತ್ರಿಯರು ಸೇರಿದಂತೆ ಮಣಿಪುರದ ಎಲ್ಲ ಜನತೆಗೂ ಹೇಳಲು ಬಯಸುತ್ತೇನೆ” ಎಂದೂ ಅವರು ಹೇಳಿದ್ದಾರೆ.