ಮತದಾನೋತ್ತರ ಸಮೀಕ್ಷೆಗಳ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ...

Update: 2024-06-01 17:10 GMT

ನರೇಂದ್ರ ಮೋದಿ | PTI 

ಹೊಸದಿಲ್ಲಿ: ಮತದಾನೋತ್ತರ ಸಮೀಕ್ಷೆಗಳು ಬಿಡುಗಡೆಯಾದ ಬೆನ್ನಿಗೇ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, "ಎನ್‌ಡಿಎ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಭಾರತೀಯ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ" ಎಂದು ಪ್ರತಿಪಾದಿಸಿದ್ದಾರೆ.

"ಭಾರತೀಯ ಮತದಾರರು ದಾಖಲೆಯ ಸಂಖ್ಯೆಯಲ್ಲಿ ಎನ್‌ಡಿಎ ಪರ ತಮ್ಮ ಮತ ಚಲಾಯಿಸಿದ್ದಾರೆ ಎಂದು ನಾನು ಆತ್ಮವಿಶ್ವಾಸದಿಂದ ಹೇಳಬಲ್ಲೆ. ನಮ್ಮ ಎಲ್ಲ ಯೋಜನೆಗಳೂ ಅರ್ಹ ಫಲಾನುಭವಿಗಳಿಗೆ ಯಾವುದೇ ಪಕ್ಷಪಾತ ಅಥವಾ ಸೋರಿಕೆ ಇಲ್ಲದೆ ತಲುಪಿವೆ" ಎಂದು ಅವರು ಬರೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News