ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ದಿಗೆ ಪ್ರಧಾನಿ ಮೋದಿ ಚಾಲನೆ

Update: 2023-08-06 07:13 GMT

ಹೊಸದಿಲ್ಲಿ: ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ರವಿವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ಈ 508 ನಿಲ್ದಾಣಗಳು ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಪಶ್ಚಿಮ ಬಂಗಾಳದಲ್ಲಿ 37, ಮಧ್ಯಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್ನಲ್ಲಿ 22 ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18 , ಹರ್ಯಾಣದಲ್ಲಿ 15 ಹಾಗೂ ಕರ್ನಾಟಕದಲ್ಲಿ 13 ನಿಲ್ದಾಣಗಳು ಸೇರಿದಂತೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿಕೊಂಡಿವೆ.,ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

24,470 ಕೋಟಿ ರೂ. ವೆಚ್ಚದ ಈ ಮರುಅಭಿವೃದ್ಧಿಯು ಪ್ರಯಾಣಿಕರಿಗೆ ಆಧುನಿಕ ಸೌಕರ್ಯಗಳನ್ನು ಒದಗಿಸುತ್ತದೆ, ಜೊತೆಗೆ ಉತ್ತಮವಾಗಿ ವಿನ್ಯಾಸಗೊಳಿಸಲಾದ ಸಂಚಾರ ವ್ಯವಸ್ಥೆ, ಅಂತರ-ಮಾದರಿ ಏಕೀಕರಣ ಹಾಗೂ ಪ್ರಯಾಣಿಕರ ಮಾರ್ಗದರ್ಶನಕ್ಕಾಗಿ ಉತ್ತಮವಾಗಿ ವಿನ್ಯಾಸಗೊಳಿಸಲಾದ ಸೂಚನಾ ಫಲಕಗಳನ್ನು ಒದಗಿಸುತ್ತದೆ ಎಂದು ಪಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

ನಿಲ್ದಾಣದ ಕಟ್ಟಡಗಳು ಸ್ಥಳೀಯ ಸಂಸ್ಕೃತಿ, ಪರಂಪರೆ ಹಾಗೂ ವಾಸ್ತುಶಿಲ್ಪದಿಂದ ಸ್ಫೂರ್ತಿ ಪಡೆದಿವೆ.

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News