ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಖಾತೆ ತೆರೆದ ಪ್ರಧಾನಿ ನರೇಂದ್ರ ಮೋದಿ

Update: 2025-03-17 22:56 IST
ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಖಾತೆ ತೆರೆದ ಪ್ರಧಾನಿ ನರೇಂದ್ರ ಮೋದಿ

Photo : Truth Social/ Narendra Modi

  • whatsapp icon

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಮೆರಿಕ ಡೊನಾಲ್ಡ್ ಟ್ರಂಪ್ ಅವರ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುತ್ ನಲ್ಲಿ ಖಾತೆ ತೆರೆದಿದ್ದಾರೆ. ತಮ್ಮ ಚೊಚ್ಚಲ ಪೋಸ್ಟ್‌ನಲ್ಲಿ ಪ್ರದಾನಿ ಮೋದಿ ಅವರು ಅಮೆರಿಕ ಅಧ್ಯಕ್ಷರೊಂದಿಗಿನ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದು, ಇದು ಇಬ್ಬರು ನಾಯಕರ ನಡುವಿನ ಆತ್ಮೀಯತೆಯನ್ನು ಸೂಚಿಸುವಂತಿದೆ.

ತಮ್ಮದೇ ಒಡೆತನದ ಸಾಮಾಜಿಕ ಮಾಧ್ಯಮವಾದ ಟುತ್ ನಲ್ಲಿ ಡೊನಾಲ್ಡ್ ಟ್ರಂಪ್ ಸಂವಹನ ಮಾಡುತ್ತಾರೆ.

“ಟ್ರುತ್ ಸೋಶಿಯಲ್‌ನಲ್ಲಿರುವುದಕ್ಕೆ ಸಂತೋಷವಾಗಿದೆ! ಇಲ್ಲಿರುವ ಎಲ್ಲಾ ಉತ್ಸಾಹಭರಿತ ಧ್ವನಿಗಳೊಂದಿಗೆ ಸಂವಹನ ನಡೆಸಲು ಮತ್ತು ಮುಂಬರುವ ದಿನಗಳಲ್ಲಿ ಅರ್ಥಪೂರ್ಣ ಸಂಭಾಷಣೆಗಳಲ್ಲಿ ಭಾಗಿಯಾಗಲಿದ್ದೇನೆ", ಎಂದು ಪ್ರಧಾನಿ ಮೋದಿ ಟ್ರುತ್ ಸೋಶಿಯಲ್‌ನಲ್ಲಿ ತಮ್ಮ ಮೊದಲ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಈ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 22, 2019 ರಂದು ಟೆಕ್ಸಾಸ್‌ನ ಹೂಸ್ಟನ್‌ನ ಎನ್‌ಆರ್‌ಜಿ ಕ್ರೀಡಾಂಗಣದಲ್ಲಿ ನಡೆದ 'ಹೌಡಿ ಮೋದಿ' ಕಾರ್ಯಕ್ರಮದಲ್ಲಿ ಟ್ರಂಪ್ ಅವರ ಕೈ ಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಪ್ರಧಾನಿ ಮೋದಿ ಅವರ ಪಾಡ್‌ಕ್ಯಾಸ್ಟ್‌ನ ಯೂಟ್ಯೂಬ್ ಲಿಂಕ್ ಅನ್ನು ಟ್ರುತ್ ಸೋಶಿಯಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ಕೆಲವೇ ಗಂಟೆಗಳ ನಂತರ, ಪ್ರಧಾನಿ ಮೋದಿ ಅವರು ಟ್ರುತ್ ನಲ್ಲಿ ಖಾತೆ ತೆರೆದರು. ಆ ಬಳಿಕ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಫಾಲೋ ಮಾಡಿದರು. ತಮ್ಮ ಪಾಡ್ಕಾಸ್ಟ್ ಹಂಚಿಕೊಂಡಿದ್ದಕ್ಕೆ ಮೋದಿ ಅವರು ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

Full View

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News