ನಗರವಾರು, ಕೇಂದ್ರವಾರು ನೀಟ್‌ ಫಲಿತಾಂಶಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ಆದೇಶ

Update: 2024-07-18 11:21 GMT

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ನೀಟ್-ಯುಜಿ 2024 ರಲ್ಲಿ ನಡೆದಿದೆಯೆನ್ನಲಾದ ಅವ್ಯವಹಾರಗಳ ಕುರಿತಂತೆ ಹಲವು ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್,‌ ಪರೀಕ್ಷೆಯ ನಗರ ಮತ್ತು ಕೇಂದ್ರವಾರು ಫಲಿತಾಂಶಗಳನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜನ್ಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಹಾಗೂ ಫಲಿತಾಂಶಗಳನ್ನು ಈ ರೀತಿ ಪ್ರಕಟಿಸುವಾಗ ಅಭ್ಯರ್ಥಿಗಳ ಗುರುತನ್ನು ಮರೆಮಾಡಬೇಕು ಎಂದು ಹೇಳಿದೆ.

ಈ ರೀತಿ ಫಲಿತಾಂಶಗಳನ್ನು ಪ್ರಕಟಿಸಲು ಏಜನ್ಸಿಗೆ ಸುಪ್ರೀಂ ಕೋರ್ಟ್‌ ಶನಿವಾರದ ತನಕ ಸಮಯಾವಕಾಶ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News