ಪ್ರಿಯಾಂಕಾ ಗಾಂಧಿಯ ಸಕ್ರಿಯ ಚುನಾವಣಾ ಕಣಕ್ಕೆ ರಾಯ್ ಬರೇಲಿಯಿಂದ ವೇದಿಕೆ ಸಜ್ಜು?

Update: 2024-02-12 14:29 GMT

ಸೋನಿಯಾ ಗಾಂಧಿ , ಪ್ರಿಯಾಂಕಾ ಗಾಂಧಿ | Photo: PTI 

ಹೊಸದಿಲ್ಲಿ : ಕಾಂಗ್ರೆಸ್‌ನ ನಾಯಕಿ ಸೋನಿಯಾ ಗಾಂಧಿ ಅವರು ಲೋಕಸಭೆ ಚುನಾವಣೆಯ ಭರಾಟೆಯಿಂದ ಹೊರನಡೆಯುವ ಸಾಧ್ಯತೆಯಿದೆ. ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆಯಲ್ಲಿ ಸೋನಿಯಾ ಸ್ಥಾನ ತುಂಬಲಿದ್ದಾರೆ ಎಂದು ndtv ವರದಿ ಮಾಡಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಕ್ರಿಯ ಚುನಾವಣಾ ಕಣಕ್ಕೆ ಬರಲು ರಾಯ್ ಬರೇಲಿಯ ಲೋಕಸಭಾ ಕ್ಷೇತ್ರ ವೇದಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ದಶಕಗಳಿಂದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆಯು ಅತ್ಯಂತ ಕಡಿಮೆ ಮಟ್ಟದಲ್ಲಿದ್ದಾಗಲೂ ಸೋನಿಯಾ ಅವರು ರಾಯ್ ಬರೇಲಿ ಕ್ಷೇತ್ರದಲ್ಲಿ ಗೆದ್ದಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News