ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ: 'ಇಂಡಿಯಾ' ಮೈತ್ರಿಕೂಟ ಸಂಭ್ರಮಾಚರಣೆ

Update: 2023-08-07 07:29 GMT

Screengrab: (Twitter/@kharge)

ಹೊಸದಿಲ್ಲಿ: 'ಇಂಡಿಯಾ'  ಮೈತ್ರಿಕೂಟದ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವವನ್ನು ಮರುಸ್ಥಾಪನೆ ಮಾಡಿರುವುದನ್ನು ಶ್ಲಾಘಿಸಿದ್ದಾರೆ, ಇದು "ಸತ್ಯದ ವಿಜಯ" ಎಂದು ಬಣ್ಣಿಸಿದ್ದಾರೆ.

ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮರಳುವ ಘೋಷಣೆ ಬಂದ ಕೂಡಲೇ ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ರಾಹುಲ್ ಗಾಂಧಿ ಪರವಾಗಿ ಡ್ಯಾನ್ಸ್ ಮಾಡಿ ಘೋಷಣೆಗಳನ್ನು ಕೂಗುತ್ತಾ ಸಂಭ್ರಮಾಚರಣೆ ನಡೆಸಿದರು.

ರಾಹುಲ್ ಅವರ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಹಾಗೂ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಪ್ರಕಟಿಸಿತು.

ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸಿಹಿ ಹಂಚಿ ಸಂಭ್ರಮಿಸಿದರು.

ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ಮರುಸ್ಥಾಪಿಸದೆ ಇರುವುದಕ್ಕೆ ಪ್ರತಿಪಕ್ಷಗಳು ಸರಕಾರವನ್ನುಇಂದು ಬೆಳಗ್ಗೆ ತರಾಟೆಗೆ ತೆಗೆದುಕೊಂಡವು.

ಕಾಂಗ್ರೆಸ್ ನಾಯಕನ ಹೇಳಿಕೆಗಳು ಉತ್ತಮ ಅಭಿರುಚಿಯಿಲ್ಲದಿದ್ದರೂ, ಸಂಸತ್ತಿನಿಂದ ಅವರನ್ನು ಅನರ್ಹಗೊಳಿಸುವುದು ಅವರ ಮತದಾರರ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್. ಶುಕ್ರವಾರ ತೀರ್ಪಿನಲ್ಲಿ ಹೇಳಿತ್ತು.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News