ಈಡಿಯಿಂದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಸಾಧ್ಯತೆ?

Update: 2024-03-21 15:07 GMT

ಅರವಿಂದ್ ಕೇಜ್ರಿವಾಲ್ (PTI)

ಹೊಸದಿಲ್ಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಈಡಿ)ವು ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿದೆ. ಈ ಬೆನ್ನಲ್ಲೇ ಕೇಜ್ರಿವಾಲ್‌ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ದಿಲ್ಲಿ ಸರಕಾರದ ಸಚಿವ ಸೌರಭ್ ಭಾರದ್ವಾಜ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಮಧ್ಯೆ ಕೇಜ್ರಿವಾಲ್ ಅವರು ಈಗ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ದಿಲ್ಲಿ ಸಿಎಂ ನಿವಾಸದ ಎದುರು ಮುನ್ನೆಚ್ಚರಿಕೆಯ ಕ್ರಮವಾಗಿ ʼರ‍್ಯಾಪಿಡ್‌ ಆಕ್ಷನ್ ಫೋರ್ಸ್ʼ (RAF) ನಿಯೋಜನೆ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ರಿಗೆ ಜಾರಿ ನಿರ್ದೇಶನಾಲಯವು 8 ಬಾರಿ ಸಮನ್ಸ್‌ ನೀಡಿತ್ತು. ಕೇಜ್ರಿವಾಲ್‌ ಸ್ಪಂದಿಸಿರಲಿಲ್ಲ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಿಸಿತು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News