ಲೋಕಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌

Update: 2024-06-25 09:09 GMT

ಸಸಿಕಾಂತ್‌ ಸೆಂಥಿಲ್‌ | PC : sansadtv.com

ಹೊಸದಿಲ್ಲಿ: ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಂಗಳವಾರ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾನವಚನ ಸ್ವೀಕರಿಸಿದ್ದಾರೆ.

ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಸಂವಿಧಾನ ಕೈಯ್ಯಲ್ಲಿ ಹಿಡಿದು ಗಮನ ಸೆಳೆದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಅಲ್ಪಸಂಖ್ಯಾತರ, ದಲಿತರ, ಮತ್ತು ಆದಿವಾಸಿಗಳ ಮೇಲಿನ ನಾಚಿಕೆಗೇಡಿನ ದೌರ್ಜನ್ಯವನ್ನು ನಿಲ್ಲಿಸಿ ಜೈ ಭೀಮ್ ಜೈ ಸಂವಿಧಾನ”(stop the shameful atrocities against minorities Dalits and Adivasi’s Jai bheem jai samvidan) ಎಂದು ವೇದಿಕೆಯಿಂದಲೇ ಹೇಳಿದರು.

ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೆಂಥಿಲ್‌ ದಾಖಲೆ 5,72,155 ಮತಗಳ ಅಂತರದಿಂದ ಜಯ ಗಳಿಸಿದ್ದರು.

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿರುವ ಸೆಂಥಿಲ್‌ ನಂತರ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿ ಮುಂದೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದರು. 2009 ಬ್ಯಾಚಿನ ಅಧಿಕಾರಿಯಾಗಿದ್ದ ಸೆಂಥಿಲ್‌ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸಾಮಾಜಿಕ ಕ್ಷೇತ್ರವನ್ನು ಪ್ರವೇಶಿಸಿದ್ದರು. ಬಳಿಕ ಕಾಂಗ್ರೆಸ್‌ ಪಕ್ಷ ಸೇರಿದ್ದರು.

2023 ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ವಾರ್‌ ರೂಮ್‌ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರಲ್ಲದೆ ಲೋಕಸಭಾ ಚುನಾವಣೆ ವೇಳೆಯೂ ಪಕ್ಷದ ವಾರ್‌ ರೂಮ್‌ ನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News