ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತನಿಗೆ ಷರತ್ತು ಬದ್ಧ ಜಾಮೀನು ಮಂಜೂರು

Update: 2024-09-02 11:43 GMT

ಬಿಭವ್ ಕುಮಾರ್ (Photo: PTI)

ಹೊಸದಿಲ್ಲಿ: ಆಪ್ ನ ರಾಜ್ಯ ಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಬಿಭವ್ ಕುಮಾರ್ ಅವರು ಈಗಾಗಲೇ 100 ದಿನಗಳಿಗಿಂತ ಹೆಚ್ಚು ಅವಧಿಯನ್ನು ಕಸ್ಟಡಿಯಲ್ಲಿ ಕಳೆದಿದ್ದಾರೆ ಮತ್ತು 51ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಬೇಕಾಗಿರುವುದರಿಂದ ವಿಚಾರಣೆ ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ದಿಲ್ಲಿ ಮುಖ್ಯಮಂತ್ರಿಯ ವೈಯಕ್ತಿಕ ಕಾರ್ಯದರ್ಶಿಯಾಗಿ ಮುಂದುವರಿಯುವಂತಿಲ್ಲ ಅಥವಾ ಮುಖ್ಯಮಂತ್ರಿ ಕಚೇರಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗಿಸುವಂತಿಲ್ಲ, ಎಲ್ಲಾ ಸಾಕ್ಷಿಗಳನ್ನು ವಿಚಾರಣೆ ಮಾಡುವವರೆಗೆ ಅವರು ಸಿಎಂ ನಿವಾಸವನ್ನು ಪ್ರವೇಶಿಸಬಾರದು, ವಿಚಾರಣಾ ನ್ಯಾಯಾಲಯವು ವಿಷಯವನ್ನು ಇತ್ಯರ್ಥಪಡಿಸುವವರೆಗೆ ಅವರು ಕೆಲಸ ಮಾಡುವ ರಾಜಕೀಯ ಪಕ್ಷವು ಈ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆಯನ್ನು ನೀಡುವಂತಿಲ್ಲ ಎಂದು ಕೋರ್ಟ್ ಷರತ್ತನ್ನು ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News