ಗೋವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ : ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

Update: 2025-04-09 18:04 IST
ಗೋವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ : ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ
  • whatsapp icon

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗೋವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ವಿಜಯ್ ಅಹಿರ್ವಾರ್, ದ್ವಾರಕಾ ಗೋಸ್ವಾಮಿ ಬಂಧಿತ ಆರೋಪಿಗಳು.

ಮೊದಲ ಘಟನೆ ಇಂದೋರ್‌ನಲ್ಲಿ ನಡೆದಿದೆ. ಕೃತ್ಯದ ವೀಡಿಯೊ ವೈರಲ್ ಆಗುತ್ತಿದ್ದಂತೆ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವೀಡಿಯೊ ಪರಿಶೀಲನೆ ಬಳಿಕ ಪೊಲೀಸರು ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಜಯ್‌ನನ್ನು ಬಂಧಿಸಿದರು.

ಇಂದೋರ್‌ನಿಂದ 200ಕಿಮೀ ದೂರದಲ್ಲಿರುವ ಮಂದಸೌರ್ ಜಿಲ್ಲೆಯ ಅಫ್ಝಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಮತ್ತೊಂದು ಘಟನೆ ವರದಿಯಾಗಿದೆ. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮಂದಸೌರ್ ನಿವಾಸಿ ದ್ವಾರಕಾ ಗೋಸ್ವಾಮಿಯನ್ನು ಬಂಧಿಸಲಾಗಿದೆ.

ಇಬ್ಬರು ಆರೋಪಿಗಳ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ- 1960 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News