ಸೋನಿಯಾ ಗಾಂಧಿ ದಿಲ್ಲಿ ಆಸ್ಪತ್ರೆಗೆ ದಾಖಲು: ವರದಿ
ಹೊಸದಿಲ್ಲಿ: ಸ್ವಲ್ಪ ಮಟ್ಟಿನ ಜ್ವರದಿಂದಾಗಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಿಲ್ಲಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಮೂಲಗಳ ಪ್ರಕಾರ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಪ್ರಸ್ತುತ ಸ್ಥಿರರಾಗಿದ್ದಾರೆ.
ಇದಕ್ಕೂ ಮುನ್ನ ಸೋನಿಯಾ ಗಾಂಧಿ 2023ರಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಸೋನಿಯಾರನ್ನು ಜನವರಿ 12, 2023 ರಂದು ದಿಲ್ಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ಜನವರಿ 17, 2023 ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
2023 ರ ಮಾರ್ಚ್ 2 ರಂದು ಜ್ವರದ ಕಾರಣ ಸೋನಿಯಾ ಗಾಂಧಿ ಮತ್ತೆ ಅದೇ ಆಸ್ಪತ್ರೆಗೆ ದಾಖಲಾಗಿದ್ದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು ಇತ್ತೀಚೆಗೆ ಆಗಸ್ಟ್ 31 ರಂದು ಮುಂಬೈನಲ್ಲಿ ನಡೆದ ವಿರೋಧ ಪಕ್ಷದ ಒಕ್ಕೂಟ INDIA ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದರು. ಅವರು ತಮ್ಮ ಮಗ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಅಲ್ಲಿಗೆ ತೆರಳಿದ್ದರು.