ಸೆಪ್ಟೆಂಬರ್ 19 ರಿಂದ ಹೊಸ ಕಟ್ಟಡದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ : ವರದಿ

Update: 2023-09-06 09:33 GMT

Photo: Twitter

ಹೊಸದಿಲ್ಲಿ: ಸಂಸತ್ತಿನ ವಿಶೇಷ ಅಧಿವೇಶನವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿದೆ.

ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಸಂಸತ್ತಿನ ಕಾರ್ಯಚಟುವಟಿಕೆಗಳು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಈ ವರ್ಷದ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್ ಭವನ ಉದ್ಘಾಟನೆಗೊಳಿಸಿದ್ದರು.

.ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಯಾವುದೇ ಅಜೆಂಡಾ ಪಟ್ಟಿ ಮಾಡಿಲ್ಲ ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಬೆಟ್ಟು ಮಾಡಿದ್ದಾರೆ.

"ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ. ಎಲ್ಲಾ ಐದು ದಿನಗಳನ್ನು ಸರಕಾರಿ ವ್ಯವಹಾರಕ್ಕೆ ಮೀಸಲಿಡಲಾಗಿದೆ ಎಂದು ನಮಗೆ ತಿಳಿಸಲಾಗಿದೆ " ಎಂದು ಸೋನಿಯಾ ಗಾಂಧಿ ಇಂದು ತನ್ನ ಪತ್ರದಲ್ಲಿ ತಿಳಿಸಿದ್ದಾರೆ.

ಈ ತಿಂಗಳ ಅಂತ್ಯದಲ್ಲಿ ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ದೇಶದ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಸರಕಾರ ಮುಂದಿಡಬಹುದು ಎಂದು ಮೂಲಗಳು ತಿಳಿಸಿವೆ

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News