ದೇಶದ್ರೋಹ ಕಾನೂನು ಪ್ರಶ್ನಿಸುವ ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
Update: 2023-09-12 07:30 GMT
ಹೊಸದಿಲ್ಲಿ: ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ವಿಚಾರಣೆಯನ್ನು ಮುಂದೂಡಬೇಕೆಂಬ ಕೇಂದ್ರ ಸರಕಾರದ ಮನವಿಯನ್ನು ತಿರಸ್ಕರಿಸಿದೆ ಎಂದು NDTV ವರದಿ ಮಾಡಿದೆ.
ಐವರು ಸದಸ್ಯರ ಪೀಠದ ರಚನೆಗೆ ನಿರ್ಧಾರ ಕೈಗೊಳ್ಳಲು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತನ್ನ ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ.